ಗುರುವಾರ , ಮೇ 19, 2022
21 °C

ಮಠಗಳಿಂದ ಶೇ 30 ಕಮಿಷನ್‌: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿ.ಎಂ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಠಗಳಿಗೆ ಮಂಜೂರಾದ ಅನುದಾನದ ಮೊತ್ತ ಪಡೆಯಲು ಶೇ 30ರಷ್ಟು ಕಮಿಷನ್‌ ಕೊಡಬೇಕಿದೆ ಎಂಬ ಆರೋಪಕ್ಕೆ ಪೂರಕವಾಗಿ ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ಒದಗಿಸಿದರೆ ತನಿಖೆಗೆ ಸಿದ್ಧ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ದಿಂಗಾಲೇಶ್ವರರು ಪರಮಪೂಜ್ಯರು, ಮಹಾತ್ಮರು, ತಪಸ್ವಿಗಳು. ಮಠಾಧೀಶರು ಹೇಳಿಕೆ ನೀಡಿದರೆ ಸಾಕಾಗುವುದಿಲ್ಲ’ ಎಂದು ಹೇಳಿದರು.

‘ಸ್ವಾಮೀಜಿಗಳು ಯಾರಿಗೆ? ಯಾವ ಉದ್ದೇಶಕ್ಕಾಗಿ? ಎಷ್ಟು ಮೊತ್ತದ ಲಂಚ ಕೊಟ್ಟಿದ್ದಾರೆ ಎಂಬುದರ ಬಗ್ಗೆ ವಿವರಗಳನ್ನು ಒದಗಿಸಲಿ. ಪ್ರಕರಣದ ಸಂಪೂರ್ಣ ಆಳಕ್ಕೆ ಇಳಿದು ತನಿಖೆ ಮಾಡಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು