ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರ ಬೆಂಬಲಿಸಿದ, ಎಚ್‌ಡಿಕೆ ಟೀಕಿಸಿದ ಕೋಡಿಹಳ್ಳಿ ವಿರುದ್ಧ ಸಿಎಂ ಆಕ್ರೋಶ

Last Updated 12 ಡಿಸೆಂಬರ್ 2020, 11:55 IST
ಅಕ್ಷರ ಗಾತ್ರ
ADVERTISEMENT
"ಮುಖ್ಯಮಂತ್ರಿ ಮಾಧ್ಯಮ ಹೇಳಿಕೆ "

ಬೆಂಗಳೂರು: ಸಾರಿಗೆ ನೌಕರರನ್ನು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ದುರುದ್ದೇಶದಿಂದ ಎತ್ತಿಕಟ್ಟುತ್ತಿದ್ದಾರೆ. ಅಲ್ಲದೆ, ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧ ಅವರು ಆಡಿರುವ ಲಘುವಾದ ಮಾತುಗಳು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, 'ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸಮಸ್ಯೆ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಸೂಚನೆ ನೀಡಲಾಗಿದೆ. ಆದರೆ, ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರು ದುರುದ್ದೇಶದಿಂದ ಕೆಲವು ನೌಕರರನ್ನು ಎತ್ತಿಕಟ್ಟಿ, ಮುಷ್ಕರ ನಡೆಸಲು ಮತ್ತು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ,' ಎಂದು ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಮಾಧ್ಯಮ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧದ ಕೋಡಿಹಳ್ಳಿ ಅವರ ಟೀಕೆಯನ್ನು ಸಿಎಂ ವಿರೋಧಿಸಿದ್ದಾರೆ. 'ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ ಅತ್ಯಂತ ಲಘುವಾಗಿ ಮಾತಾಡಿರುವುದು ಖಂಡನೀಯ,' ಎಂದು ಸಿಎಂ ಹೇಳಿದ್ದಾರೆ.

ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಮರಳಿ– ಮುಖ್ಯಮಂತ್ರಿ ಮನವಿ

ಬೆಂಗಳೂರು: ‘ಸಾರ್ವಜನಿಕ ಹಿತದೃಷ್ಟಿಯಿಂದ ಸಾರಿಗೆ ನೌಕರರು ಕೂಡಲೇ ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಮರಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಟ್ವೀಟ್‌ ಮಾಡಿರುವ ಅವರು, ‘ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಸೂಚನೆ ನೀಡಲಾಗಿದೆ. ಸಚಿವರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT