ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಎಂ.ಸಿ.ಮನಗೂಳಿ ನಿಧನಕ್ಕೆ ದೇವೇಗೌಡ, ಯಡಿಯೂರಪ್ಪ ಸಂತಾಪ

Last Updated 28 ಜನವರಿ 2021, 3:54 IST
ಅಕ್ಷರ ಗಾತ್ರ

ಬೆಂಗಳೂರು: ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸಂತಾಪ ಸೂಚಿಸಿ ಟ್ವೀಟ್‌ ಮಾಡಿರುವ ಎಚ್.ಡಿ.ದೇವೇಗೌಡ, ‘ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ’ ಎಂದು ಹೇಳಿದ್ದಾರೆ.

‘ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ವಿಧಿವಶರಾದ ಸುದ್ದಿ ತೀವ್ರ ಆಘಾತ ತಂದಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

‘ಮಾಜಿ ಸಚಿವರು, ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕರು ಶ್ರೀ ಎಂ.ಸಿ.ಮನಗೂಳಿ ಅವರ ನಿಧನದ ಸುದ್ದಿ ನೋವು ಹಾಗೂ ಆಘಾತ ತಂದಿದೆ. ನಾಡಿನ ಹಿರಿಯ ನಾಯಕರಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿಸಿಎಂ ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

‘ಮಾಜಿ ಸಚಿವರು, ಸಿಂದಗಿಯ ಜೆಡಿಎಸ್ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಇವರ ಕೊಡುಗೆಗಳು ಅಪಾರ. ಭಗವಂತ ಅವರ ಕುಟುಂಬಿಕರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ. ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿಸಿಎಂ ಲಕ್ಷ್ಮಣ ಸವದಿ ಟ್ವೀಟ್‌ ಮಾಡಿದ್ದಾರೆ.

‘ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾಗಿದ್ದ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು. ದೇವರು ಅವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ, ಕುಟುಂಬ ಸದಸ್ಯರಿಗೆ ಹಾಗೂ ಕಾರ್ಯಕರ್ತರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಚಿವ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT