ಬೆಂಗಳೂರು: ರೈತರ ಹೊಲಗಳಿಗೆ ಹೋಗಿ ಮಣ್ಣು, ನೀರು, ರೋಗ ಪರೀಕ್ಷೆ ಮಾಡುವ ವಾಹನ, ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು.

ವಿಧಾನಸೌಧದ ಮೆಟ್ಟಿಲುಗಳ ದ್ವಾರದ ಬಳಿ ಗುರುವಾರ ಬೆಳಿಗ್ಗೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, '40 ವಾಹನಗಳನ್ನು ಲೋಕಾರ್ಪಣೆ ಮಾಡಿದ್ದೇನೆ. ಇವು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುವ ಚಿಂತನೆ ಇದೆ’ ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ‘ಪ್ರತಿಯೊಂದು ರೈತ ಸಂಪರ್ಕ ಕೇಂದ್ರಕ್ಕೂ ಒಂದೊಂದು ಕೃಷಿ ಸಂಜೀವಿನಿ ವಾಹನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದರು. ‘ಕೃಷಿ ಸಂಜೀವಿನಿ’ ವಾಹನ ಚಲಾಯಿಸಿ ಚಾಲಕರು ಪ್ರಾತ್ಯಕ್ಷಿಕೆ ತೋರಿಸಿದರು.

ಏನಿದು ‘ಕೃಷಿ ಸಂಜೀವಿನಿ’: ಬೆಳೆಗಳಿಗೆ ಕಾಡುವ ಕೀಟರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ ಮತ್ತು ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ‘ಕೃಷಿ ಸಂಜೀವಿನಿ’ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೃಷಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.

‘ಕೃಷಿ ಸಂಜೀವಿನಿ’ ಸ್ಥಾಪನೆಯಿಂದ ರೋಗ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಮತ್ತು ಈ ಸಂಚಾರಿ ವಾಹನ ಸೌಲಭ್ಯದಿಂದ ಹೆಚ್ಚಿನ ಸಂಖ್ಯೆಯ ರೈತರ ತಾಕುಗಳಿಗೆ ತಾಂತ್ರಿಕ ತಂಡ ಭೇಟಿ ನೀಡಲು ಸಹಕಾರಿಯಾಗಲಿದೆ. ರೈತರು ತಮ್ಮ ಮಟ್ಟದಲ್ಲಿ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು, ಗುಣಮಟ್ಟದ ರಸಗೊಬ್ಬರ ಖರೀದಿಸಬಹುದಾಗಿದೆ. ರಸಗೊಬ್ಬರಗಳು ಕಲಬೆರಕೆಯಾಗಿದೆಯೇ ಅಥವಾ ನಕಲಿ ಗೊಬ್ಬರವೇ ಎಂದು ತಿಳಿಯಲು ಸುಲಭ ಪರೀಕ್ಷೆಯ ಪ್ರಾತ್ಯಕ್ಷಿಕೆಗಳನ್ನು ರೈತರಿಗೆ ನೀಡಲಾಗುವುದು. ಇದರಿಂದ ರೈತರು ತಮ್ಮ ಹಂತದಲ್ಲಿಯೇ ರಸಗೊಬ್ಬರಗಳ ಗುಣಮಟ್ಟ ತಿಳಿದು ಖರೀದಿಸಬಹುದಾಗಿದೆ.

ಹೇಗೆ ಕಾರ್ಯನಿರ್ವಹಿಸಲಿದೆ?: ಕೃಷಿ ಸಂಜೀವಿನಿ ಟೋಲ್ ಫ್ರೀ (155313) ಸಹಾಯವಾಣಿ. ಈ ಸಂಖ್ಯೆಗೆ ಕರೆ ಮಾಡಿದರೆ ರೈತರಿರುವ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗಲಿದೆ. ಆಗ ರೈತರು ತಮ್ಮ ಸಮಸ್ಯೆಯನ್ನು ತಿಳಿಸಿ, ಪರಿಹಾರ ಪಡೆಯಬಹುದು. ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್‌ನಂತೆ ಈ ಸಹಾಯವಾಣಿ ಕೆಲಸ ಮಾಡಲಿದೆ ಎಂದು ಕೃಷಿ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.