ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ

ಬೆಳಗಾವಿ: ಇಲ್ಲಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ.
ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಕೆ.ಎಸ್. ಈಶ್ವರಪ್ಪ, ಜಗದೀಶ ಶೆಟ್ಟರ್, ರಮೇಶ್ ಜಾರಕಿಹೊಳಿ, ಆರ್. ಅಶೋಕ್,
ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಇದ್ದರು.

ಕಾರ್ಯಕಾರಿಣಿಗೆ ಮುತ್ತಿಗೆ ಯತ್ನ: ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರ ವಶಕ್ಕೆ
ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳಿಂದ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬೆಂಬಲಿಸಿ ಕನ್ನಡಪರ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಗಾಂಧಿ ಭವನದಲ್ಲಿ ನಡೆದಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.