ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ: ಪರಿಪರಿಯಾಗಿ ಮನವಿ ಮಾಡಿದರೂ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನೌಕರರು ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ನಾನು ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧವಿದ್ದೇನೆ. ನೌಕರರು ಹಟ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಆ ನೌಕರರ 9 ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶದಿಂದ ಹಟ ಮಾಡುವುದು ಸರಿಯಲ್ಲ ಎಂದರು.
ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಖಾಸಗಿಯವರು ಹೆಚ್ಚಿಗೆ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರ ಸುಲಿಗೆ ಮಾಡಬೇಡಿ ಎಂದು ಅವರಲ್ಲೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಮುಷ್ಕರವನ್ನು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ ಎಂದರು.
ಸರ್ಕಾರಿ ಸಾರಿಗೆ ನೌಕರರ ಮುಷ್ಕರ: ಬೆಂಗಳೂರಿನಲ್ಲಿ ರಸ್ತೆಗಿಳಿದ ಖಾಸಗಿ ಬಸ್
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.