ಶನಿವಾರ, ಜನವರಿ 23, 2021
21 °C

ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ ಸಿಎಂ ಯಡಿಯೂರಪ್ಪ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾನುವಾರ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ನಾಯಕರ ಜೊತೆ ಸಂಪುಟ ವಿಸ್ತರಣೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ವಿಸೃತವಾಗಿ ಚರ್ಚೆ ನಡೆಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು (ಭಾನುವಾರ) ಭೇಟಿಯಾಗಿ ಪಕ್ಷ ಮತ್ತು ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು ಎಂದು ತಿಳಿಸಿದರು.

ರಾಷ್ಟ್ರೀಯ ನಾಯಕರಿಗೆ ಗ್ರಾಮ ಪಂಚಾಯಿತಿ ಫಲಿತಾಂಶದ ಬಗ್ಗೆ ವಿವರವಾದ ವಿವರಣೆಯನ್ನು ನೀಡಿದ್ದೇನೆ. ಸಂಪುಟ ವಿಸ್ತರಣೆಯ ಬಗ್ಗೆಯೂ ವಿವರವಾಗಿ ಚರ್ಚಿಸಿದ್ದೇನೆ. ಶೀಘ್ರದಲ್ಲೇ ಹೆಸರುಗಳನ್ನು ಬಿಡುಗಡೆಗೊಳಿಸಲಾಗುವುದು. ಶೇಕಡಾ 100ರಷ್ಟು ಇದು ಕೊನೆಯ ಮಾತುಕತೆಯಾಗಿದ್ದು, ಆದಷ್ಟು ಬೇಗನೇ ಹೆಸರುಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆಯನ್ನು ಎಎನ್‌ಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಇದನ್ನೂ ಓದಿ: 

ಸಂಪುಣ ವಿಸ್ತರಣೆ, ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗಬೇಕು ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿರ್ವಹಣೆ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಸೃತ ಚರ್ಚೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು