ಸೋಮವಾರ, ನವೆಂಬರ್ 30, 2020
20 °C

ಸಂಪುಟದಿಂದ‌ ಕೊಕ್‌: ಕೆಲವರನ್ನು ಕೈಬಿಡುವ ಸುಳಿವು ನೀಡಿದ ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ‘ರಾಜ್ಯ ಸಚಿವ ಸಂಪುಟವನ್ನು ಇನ್ನು ಎರಡು ಮೂರು ದಿನಗಳಲ್ಲಿ ವಿಸ್ತರಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಕೆಲವರನ್ನು ಸಂಪುಟದಿಂದ ಕೈ ಬಿಡಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣೆ ಗೆಲುವಿನ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಸಂಬಂಧ ನಾಳೆ ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸುತ್ತೇನೆ’ ಎಂದು ಅವರು ತಿಳಿಸಿದರು.

‘ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮತದಾರರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತೇನೆ. ಆರ್‌.ಆರ್‌.ನಗರದ ಗೆಲುವು ಅತ್ಯಂತ ದೊಡ್ಡ ಗೆಲುವು. ಜನತೆ ನಮ್ಮ ಸರ್ಕಾರದ ಕಾರ್ಯವೈಖರಿಯನ್ನು ಮೆಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಬಾರಿಯಾಗಿದ್ದೇನೆ’ ಎಂದು ಅವರು ಹೇಳಿದರು.

ಸರ್ಕಾರದ ಆಡಳಿತ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಯಡಿಯೂರಪ್ಪ, ‘ನಮ್ಮ ಸರ್ಕಾರ ಮಾಡಿರುವ ಸಾಧನೆಗಳ ಬಗ್ಗೆ  ನಾವು ಮಾತನಾಡುತ್ತೇವೆ. ಸಿದ್ದರಾಮಯ್ಯ ಅವರಿಗೆ ನಾನ್ಯಾಕೆ ಉತ್ತರ ನೀಡಬೇಕು. ವಿರೋಧ ಪಕ್ಷಗಳಿಗೆ ಜನರೇ ಉತ್ತರ ನೀಡಿದ್ದಾರೆ’ ಎಂದು ಹೇಳಿದರು.

‘ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪಚುನಾವಣೆಗೆ ನಾವು ಸಿದ್ದತೆ ಆರಂಭಿಸಿದ್ದೇವೆ. ಬಿ.ವೈ.ವಿಜಯೇಂದ್ರ ಅವರು ಬಸವಕಲ್ಯಾಣದಿಂದ ಸ್ಪರ್ಧಿಸುವುದಿಲ್ಲ. ಆ ಚುನಾವಣೆಯಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು