ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 26ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿ.ಎಸ್‌. ಯಡಿಯೂರಪ್ಪ‌

Last Updated 17 ಜುಲೈ 2021, 12:59 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮ ನೇತೃತ್ವದ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಪ್ರಯುಕ್ತ ಜುಲೈ 26ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ ಅಥವಾ ಪರ್ಯಾಯ ನಾಯಕತ್ವದ ಕುರಿತು ನನ್ನ ಜತೆ ಯಾರೂ ಈವರೆಗೆ ಚರ್ಚಿಸಿಲ್ಲ. ನಾನು ಮುಖ್ಯಮಂತ್ರಿಯಾಗಿ ಜುಲೈ 26ಕ್ಕೆ ಎರಡು ವರ್ಷ ತುಂಬುತ್ತಿದೆ. ಅದೇ ದಿನ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ’ ಎಂದರು.

ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂಬುದು ವರಿಷ್ಠರ ಬಯಕೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಲಾಗುವುದು. ಪಕ್ಷ ಸಂಘಟನೆಯ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

‘ದೆಹಲಿ ಭೇಟಿ ಯಶಸ್ವಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂಧ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿ ಬಂದಿದ್ದೇನೆ. ಜನಪರವಾಗಿ ಕೆಲಸ ಮಾಡಿಕೊಂಡು ಹೋಗುವಂತೆ ಎಲ್ಲರೂ ಸೂಚಿಸಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT