ಸೋಮವಾರ, ಆಗಸ್ಟ್ 2, 2021
21 °C

ಕೋವಿಡ್ ಸಂಬಂಧಿ ಯಾವುದೇ ಆದೇಶದ ಅಧಿಕಾರ ಮುಖ್ಯ ಕಾರ್ಯದರ್ಶಿಗೆ ಮಾತ್ರ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಬೆಂಗಳೂರು: ಕೋವಿಡ್ ನಿರ್ವಹಣೆ, ನಿಯಂತ್ರಣದ ವಿಚಾರದಲ್ಲಿ ಮುಖ್ಯ ಕಾರ್ಯದರ್ಶಿ ಮಾತ್ರ ಆದೇಶ, ಸುತ್ತೋಲೆಗಳನ್ನು ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾಕೀತು ಮಾಡಿದ್ದಾರೆ.

ಸೋಮವಾರ ಈ ಸಂಬಂಧ ಆದೇಶ ಹೊರಡಿಸಿರುವ ಅವರು, 'ಮುಖ್ಯ ಕಾರ್ಯದರ್ಶಿ ಹೊರತಾಗಿ ಯಾವುದೇ ಸಚಿವರು ಅಥವಾ ಇಲಾಖೆಯ ಅಧಿಕಾರಿಗಳು ಆದೇಶ, ಸುತ್ತೋಲೆ ಹೊರಡಿಸುವಂತಿಲ್ಲ.

ಮುಖ್ಯ ಕಾರ್ಯದರ್ಶಿಯವರು ನನ್ನ ಅನುಮೋದನೆ ಪಡೆದ ಬಳಿಕವೇ ಆದೇಶ ಅಥವಾ ಸುತ್ತೋಲೆಗಳನ್ನು ಹೊರಡಿಸಬೇಕು' ಎಂದು ತಿಳಿಸಿದ್ದಾರೆ.

ಕೋವಿಡ್ ಮಾರ್ಗಸೂಚಿ, ನಿಯಂತ್ರಣ ಕ್ರಮಗಳ ವಿಚಾರದಲ್ಲಿ ಗೊಂದಲ ಉಂಟಾಗುತ್ತಿರುವ ಕಾರಣದಿಂದ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು