ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಪುನರಾರಂಭ ನಿರ್ಧರಿಸಿಲ್ಲ: ಸಿಎಂ ಯಡಿಯೂರಪ್ಪ

Last Updated 8 ಅಕ್ಟೋಬರ್ 2020, 16:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಾಲೆ ಪುನರಾರಂಭಿಸುವ ಕುರಿತು ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಬೇಕು. ಪೋಷಕರ ಒಪ್ಪಿಗೆ ಇಲ್ಲದೆ ಶಾಲೆ ತೆರೆಯುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.

‘ಶಾಲೆ ಆರಂಭಕ್ಕೆ ಎಲ್ಲ ಕಡೆಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ತಜ್ಞರಿಂದ ವರದಿಯನ್ನು ಕೇಳಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಇಂದಿನ ಸಭೆಯಲ್ಲಿ ಚರ್ಚೆ ನಡೆದಿಲ್ಲ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT