ಬೆಂಗಳೂರು: ಹೆಚ್ಚು ರೋಗಲಕ್ಷಣ ಇರುವವರು ಮತ್ತು ತೀವ್ರವಾಗಿ ಬಳಲುತ್ತಿರುವ ಕೋವಿಡ್ ರೋಗಿಗಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಮತ್ತು ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಶುಕ್ರವಾರ ತಮ್ಮ ನಿವಾಸದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು, ಕಡಿಮೆ ರೋಗಲಕ್ಷಣ ಇರುವವರು ಮತ್ತು ರೋಗಲಕ್ಷಣ ಇಲ್ಲದವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಿ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದರು.

ಕಾರ್ಪೋರೇಟ್ ಆಸ್ಪತ್ರೆಗಳು ಕಡಿಮೆ ರೋಗಲಕ್ಷಣ ಇರುವ ಸೋಂಕಿತರ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಹೋಟೆಲ್ ಗಳ ಜತೆ ಒಪ್ಪಂದ ಮಾಡಿಕೊಳ್ಳಬೇಕು. ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿ ಇರುವವರಿಗೆ ಮೊಹರು ಹಾಕುವ ವ್ಯವಸ್ಥೆಯನ್ನೂ ಮಾಡಬೇಕು ಎಂದು ಸೂಚಿಸಿದರು.

ಎಲ್ಲ ಖಾಸಗಿ ಆಸ್ಪತ್ರೆಗಳು ಶೇಕಡ 50ರಷ್ಟು ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ಕೋವಿಡ್ ರೋಗಿಗಳಿಗಾಗಿ ಕಾಯ್ದಿರಿಸಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1,000 ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗಾಗಿ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ತಾಕೀತು ಮಾಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ದಾಖಲಾತಿ ಮತ್ತು ಚಿಕಿತ್ಸೆ ಮೇಲೆ ನಿಗಾ ಇಡಲು ಐಎಎಸ್, ಐಪಿಎಸ್, ಜಲಮಂಡಳಿ, ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು ಎಂದು ಆದೇಶಿಸಿದರು.

ರಾಜ್ಯದಲ್ಲಿ ಆಮ್ಲಜನಕ ಸಿಲಿಂಡರ್ಕೊರತೆ ಇಲ್ಲ. ಆದರೂ, ತುರ್ತಾಗಿ 5,000 ಆಮ್ಲಜನಕ ಸಿಲಿಂಡರ್ ಖರೀದಿ ಮಾಡಬೇಕು. ರೆಮ್ ಡೆಸಿವಿರ್ ಔಷಧಿ ಕೂಡ ಸಾಕಷ್ಟು ದಾಸ್ತಾನು ಇದೆ. ಆದರೂ, ಹೆಚ್ಚುವರಿಯಾಗಿ ಈ ಔಷಧಿ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆದೇಶ ನೀಡಿದರು.

ಲಸಿಕೆ ಪೂರೈಕೆಯಿಂದ ಲಸಿಕೆ ಆಮದು ಮಾಡಿಕೊಳ್ಳುವತ್ತ ಭಾರತ

ಕೋವಿಡ್ ಪರೀಕ್ಷೆ ವರದಿಯನ್ನು 24 ಗಂಟೆಗಳ ಒಳಗಾಗಿ ನೀಡುವ ವ್ಯವಸ್ಥೆ ಮಾಡಬೇಕು. ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲು ಬೆಂಗಳೂರಿನಲ್ಲಿ 400 ಆಂಬುಲೆನ್ಸ್ ಒದಗಿಸಬೇಕು. ಎಲ್ಲ ಜಿಲ್ಲೆಗಳಲ್ಲೂ ಅಗತ್ಯ ಸಂಖ್ಯೆಯ ಆಂಬುಲೆನ್ಸ್ ಒದಗಿಸಬೇಕು ಎಂದರು.

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆ; ಏ.20ಕ್ಕೆ ಮುಂದಿನ ನಿರ್ಧಾರ–ಬಿಎಸ್ವೈ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.