ಸಿಎಂ ವಿಶೇಷ ವಿಮಾನದಲ್ಲಿ ದೆಹಲಿಗೆ ಕೊಂಡೊಯ್ದಿದ್ದು ಏನು: ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ಕೊಂಡೊಯ್ಯಿದ್ದು ಏನು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದ ಬಳಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಶುಕ್ರವಾರ ವಿಶೇಷ ವಿಮಾನದಲ್ಲಿ ದೆಹಲಿಗೆ ಹೋಗುವಾಗ ಆರು ದೊಡ್ಡ ಬ್ಯಾಗ್‌ಗಳನ್ನು ಕೊಂಡೊಯ್ದಿದ್ದಾರೆ ಎಂಬ ಮಾಹಿತಿ ಇದೆ. ಆ ಚೀಲಗಳಲ್ಲಿ ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದ ದಾಖಲಿಗಳಿದ್ದವೋ ಅಥವಾ ಬೇರೇನಾದರೂ ಇತ್ತೋ ಗೊತ್ತಿಲ್ಲ’ ಎಂದರು.
ಮುಖ್ಯಮಂತ್ರಿಯವರು ದೊಡ್ಡ ದೊಡ್ಡ ಉಡುಗೊರೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಮಾಡುವಾಗ ಆರು ಬ್ಯಾಗ್‌ಗಳನ್ನು ಕೊಂಡೊಯ್ದಿದ್ದರೋ ಅಥವಾ ಹಾಗೆಯೇ ಹೋಗಿದ್ದರೋ ಎಂದು ಪ್ರಶ್ನಿಸಿದರು.
ಇದನ್ನೂ ಓದಿ... ಅಕ್ರಮ ಗಣಿಗಾರಿಕೆ: ಅಂಬರೀಷ್ ಆದಿಯಾಗಿ ಯಾರೂ ಸಾಚಾ ಅಲ್ಲ- ಎಸ್.ಆರ್ ಹಿರೇಮಠ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.