ಮಂಗಳವಾರ, ಜೂನ್ 28, 2022
25 °C

ಸಿಎಂ ಬಿಎಸ್‌ವೈ ಹೇಳಿಕೆ ಆಡಳಿತ ಕುಸಿಯಲು ದಾರಿ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪಕ್ಷ ಸೂಚಿಸಿದರೆ ರಾಜೀನಾಮೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಹಿರಂಗ ಹೇಳಿಕೆ ನೀಡಿರುವುದು ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿಯಲು ದಾರಿಯಾಗಬಹುದು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಆರು ತಿಂಗಳಿನಿಂದಲೂ ಚರ್ಚೆ ನಡೆಯುತ್ತಿದೆ. ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ ಎಂಬುದಕ್ಕೆ ಮೈಸೂರು ಪ್ರಕರಣ ಸಾಕ್ಷಿ. ಮುಖ್ಯಮಂತ್ರಿಯೇ ಹೀಗೆ ಬಹಿರಂಗ ಹೇಳಿಕೆ ನೀಡಿದರೆ ಆಡಳಿತ ಇನ್ನಷ್ಟು ದುರ್ಬಲಗೊಳ್ಳುತ್ತದೆ’ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ನಾಯಕರು ನಾಲ್ಕು ಗೋಡೆಗಳ ನಡುವೆ ತೀರ್ಮಾನ ಮಾಡಬೇಕು. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇರಲಿ, ಹೊಸಬರು ಬರಲಿ ಯಾವ ಬದಲಾವಣೆಯೂ ಆಗುವುದಿಲ್ಲ. ಸರ್ಕಾರದಲ್ಲಿ ಇರುವ ಎಲ್ಲರಿಗೂ ತ್ವರಿತವಾಗಿ ಹಣ ಸಂಪಾದಿಸುವುದಷ್ಟೆ ಗುರಿ. ಇಂತಹ ಬೆಳವಣಿಗೆಗಳಿಂದ ರಾಜ್ಯದ ಜನರಿಗೆ ನಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು