ಶುಕ್ರವಾರ, ಆಗಸ್ಟ್ 12, 2022
27 °C
ಇಂದು ನಿರ್ಮಲಾ ಸೀತಾರಾಮನ್‌, ರಾಜನಾಥ್‌ ಸಿಂಗ್‌ ಭೇಟಿ: ನಾಳೆ ಪ್ರಧಾನಿಯೊಂದಿಗೆ ಸಮಾಲೋಚನೆ

ಸಂಪುಟ ವಿಸ್ತರಣೆ, ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ಸಿಎಂ ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಮಧ್ಯಾಹ್ನ ನವದೆಹಲಿಗೆ ಆಗಮಿಸಿದರು.

ಸುಮಾರು ಆರು ತಿಂಗಳ ನಂತರ ರಾಷ್ಟ್ರದ ರಾಜಧಾನಿಗೆ ಆಗಮಿಸಿದ ಅವರನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ  ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ತಮ್ಮನ್ನು ಭೇಟಿಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಾವು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.

ಎರಡು ದಿನಗಳ ತಮ್ಮ ಭೇಟಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಳಗೊಂಡಂತೆ ಪ್ರಮುಖ ಕೇಂದ್ರ ಸಚಿವರನ್ನು ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರೂ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದ ಯಡಿಯೂರಪ್ಪ ಅವರು, ಪಕ್ಷದ ಗಣ್ಯರೊಂದಿಗೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸುವ ತಮ್ಮ ಇಂಗಿತವನ್ನು ಬಹಿರಂಗಗೊಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು