ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾದ ಇಬ್ರಾಹಿಂ

ಬೆಂಗಳೂರು: ಸಿ.ಡಿ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು, ಮುಖ್ಯಮಂತ್ರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಮಂಗಳವಾರ ವಿಧಾನ ಪರಿಷತ್‌ನಲ್ಲಿ ಮನವಿ ಮಾಡಿದರು.
ಬೆಲೆ ಏರಿಕೆ ವಿರುದ್ಧ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡುತ್ತಿದ್ದರು. ಅಷ್ಟರಲ್ಲಿ ಮಧ್ಯ ಪ್ರವೇಶಿಸಿದ ಇಬ್ರಾಹಿಂ, ‘ಸಿ.ಡಿ ವಿಚಾರವೇ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ತಪ್ಪು ಮಾಹಿತಿ ನೀಡಿದ್ದಾರೆ. ಇದರಿಂದ ಸದನದ ಹಕ್ಕುಚ್ಯುತಿ ಅಗಿದೆ. ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು’ ಎಂದು ಸಭಾಪತಿಯವರನ್ನು ಆಗ್ರಹಿಸಿದರು.
ಸರಿಯಾದ ರೂಪದಲ್ಲಿ ವಿಷಯ ಪ್ರಸ್ತಾಪಿಸುವಂತೆ ಸಭಾಪತಿ ಸೂಚನೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.