ಸೋಮವಾರ, ಮೇ 23, 2022
30 °C

ಸಿ.ಎಂ. ಇಬ್ರಾಹಿಂಗೆ ಜೆಡಿಎಸ್ ಅಧ್ಯಕ್ಷ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿ.ಎಂ. ಇಬ್ರಾಹಿಂಗೆ ಜೆಡಿಎಸ್ ಅಧ್ಯಕ್ಷ ಸ್ಥಾನ

ರಾಮನಗರ: ಈಚೆಗಷ್ಟೇ ಜೆಡಿಎಸ್‌ಗೆ ಸೇರ್ಪಡೆ ಆಗಿರುವ ಸಿ.ಎಂ. ಇಬ್ರಾಹಿಂ ಅವರಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡುವುದಾಗಿ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಘೋಷಿಸಿದ್ದಾರೆ. 

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೂ ಇದಕ್ಕೆ ಒಪ್ಪಿಗೆ ನೀಡಿದ್ದು, ಇದೇ 17ರಂದು ಪಕ್ಷದ ಕಚೇರಿಯಲ್ಲಿ ಅವರಿಗೆ ಹೊಸ ಜವಾಬ್ದಾರಿ ನೀಡಲಾಗುವುದು’ ಎಂದು ಹೇಳಿದರು.

‘ಹಾಲಿ ಅಧ್ಯಕ್ಷರಾಗಿರುವ ಎಚ್.ಕೆ. ಕುಮಾರಸ್ವಾಮಿ ಅವರನ್ನು ಸಂಸದೀಯ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು. ಇಬ್ಬರೂ ಸಹೋದರರಂತೆ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಬೇಕು’ ಎಂದು ಗೌಡರು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು