ಮಂಗಳವಾರ, ಮೇ 11, 2021
27 °C

‘ಜೈ ಸಿಡಿ ರಾಮ್‌’ ಎಂದ ಇಬ್ರಾಹಿಂ: ಬಿಜೆಪಿ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನಾಯಕ ಸಿ.ಎಂ.ಇಬ್ರಾಹಿಂ ಅವರು ‘ಜೈ ಸಿಡಿ ರಾಮ್’ ಎಂಬ ಪದ ಬಳಕೆ ಮಾಡಿರುವುದನ್ನು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಖಂಡಿಸಿದ್ದಾರೆ.

‘ಬಿಜೆಪಿಯವರು ಜೈಶ್ರೀರಾಮ್‌ ಎನ್ನುತ್ತಿದ್ದರು. ಇನ್ನು ಮುಂದೆ ಜೈ ಸಿಡಿ ರಾಮ್ ಅನ್ನಬೇಕು' ಎಂದು ಎಂದು ವ್ಯಂಗ್ಯವಾಡಿ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.

‘ಇಬ್ರಾಹಿಂ ಅವರು ಶ್ರೀರಾಮನ ಹೆಸರು ಪ್ರಸ್ತಾಪಿಸಿ ಅಪಮಾನ ಮಾಡಿದ್ದಾರೆ. ಇದರಿಂದ ಅಸಂಖ್ಯಾತ ಹಿಂದುಗಳ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ತಕ್ಷಣವೇ ಇಬ್ರಾಹಿಂ ಅವರು ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು