ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ರಂದು ವರಿಷ್ಠರ ಜತೆ ಸಿಎಂ ಭೇಟಿ?

Last Updated 13 ಸೆಪ್ಟೆಂಬರ್ 2020, 19:37 IST
ಅಕ್ಷರ ಗಾತ್ರ

ಬೆಂಗಳೂರು: ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯಲು ಇದೇ 18ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಮಾಡುವ ಸಾಧ್ಯತೆ ಇದೆ.

‘ಸೆ.17ರ ರಾತ್ರಿ ಅಥವಾ ಸೆ. 18ರ ಬೆಳಿಗ್ಗೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಸೆ.18 ರಂದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಂಪುಟದಲ್ಲಿ ಖಾಲಿ ಇರುವ ಸಚಿವರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಸೆ.21 ರಿಂದ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದೆ. ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದರೆ ಅಧಿವೇಶನ ಆರಂಭಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಯೋಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT