ಶುಕ್ರವಾರ, ಫೆಬ್ರವರಿ 3, 2023
23 °C
ಮುಖ್ಯಮಂತ್ರಿಯಿಂದ ಕೇಂದ್ರದ ವಿವಿಧ ಸಚಿವರ ಭೇಟಿ

ಕೇಂದ್ರ ಸಚಿವರ ಭೇಟಿ ಮಾಡಿದ ಸಿಎಂ: 3 ಜವಳಿ ಪಾರ್ಕ್‌ಗೆ ಅನುದಾನ ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ವಿವಿಧ ಸಚಿವರನ್ನು ಮಂಗಳವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. 

ಕೇಂದ್ರ ಜವಳಿ ಸಚಿವ ಪೀಯೂಷ್‌ ಗೋಯೆಲ್‌ ಅವರನ್ನು ಭೇಟಿ ಮಾಡಿದ ಅವರು, ‘ಕಲಬುರಗಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಮಿತ್ರಾ ಯೋಜನೆಯಡಿ ಸಹಾಯಾನುದಾನ ಪಡೆದು ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ’ ಎಂದು ಗಮನಕ್ಕೆ ತಂದರು. 

‘ಈ ಮೂರು ಜಿಲ್ಲೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಮೀಪದಲ್ಲಿದ್ದು, ಎಲ್ಲ ಪ್ರಮುಖ ನಗರಗಳಿಗೆ ಹಾಗೂ ಬಂದರುಗಳಿಗೆ ಕೂಡ ಸಂಪರ್ಕವಿದೆ. ಈ ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದಾಗಿ ಜವಳಿ ಕೇಂದ್ರವಾಗಿ ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದೆ. ಪ್ರಧಾನಮಂತ್ರಿಗಳ ಕನಸಿನಂತೆ ಜವಳಿ ಕೇತ್ರದಲ್ಲಿ ದೇಶ ಆತ್ಮನಿರ್ಭರ್ ಆಗಲು ಕೂಡಸಹಕಾರಿಯಾಗಲಿದೆ. ಕೇಂದ್ರ ಸರ್ಕಾರದ ಮಿತ್ರಾ ಯೋಜನೆಯಡಿ ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸಬೇಕು’ ಎಂದು ಅವರು ಮನವಿ ಮಾಡಿದರು. 

2 ಲಕ್ಷ ಟನ್ ಅಕ್ಕಿ ಬಿಡುಗಡೆಗೆ ಮನವಿ: ರಾಜ್ಯಕ್ಕೆ ಹತ್ತು ಸಾವಿರ ಟನ್‌ಗಳ ಅಕ್ಕಿ ಸರಬರಾಜನ್ನು ಸೀಮಿತಗೊಳಿಸಿರುವ ನೀತಿಯನ್ನು ಮರು ಪರಿಶೀಲಸುವಂತೆ ಬೊಮ್ಮಾಯಿ ಮನವಿ ಸಲ್ಲಿಸಿದರು.

ಭಾರತೀಯ ಆಹಾರ ನಿಗಮದ ವತಿಯಿಂದ 2023ರ ಮಾರ್ಚ್‌ ವರೆಗೆ ತೆರೆದ ಮಾರುಕಟ್ಟೆ ಮಾರಾಟ ಯೋಜನೆಯಡಿ 2 ಲಕ್ಷ  ಟನ್ ಅಕ್ಕಿಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಬಿಡುಗಡೆ ಮಾಡುವಂತೆ ಹಾಗೂ ತಕ್ಷಣವೇ 50 ಸಾವಿರ  ಟನ್ ಅಕ್ಕಿಯನ್ನು ಬಿಡುಗಡೆ ಮಾಡುವಂತೆಯೂ ಕೋರಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು