ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಶುಕ್ರವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತೋಷ್ ಅವರನ್ನು ಕುಟುಂಬದವರು ಕಂಡು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರು.
ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಅವರ ಆರೋಗ್ಯ ವಿಚಾರಿಸಿದರು.
'ಸಂತೋಷ್ ರನ್ನ ಶುಕ್ರವಾರ ಬೆಳಿಗ್ಗೆಯಷ್ಟೇ ಭೇಟಿ ಮಾಡಿದ್ದೆ. ಇಬ್ಬರೂ ವಾಯುವಿಹಾರ ಮಾಡಿದ್ದೆವು. ಆತ್ಮಹತ್ಯೆಗೆ ಕಾರಣ ಏನೆಂಬುದರ ಮಾಹಿತಿ ಇಲ್ಲ.ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ತಿಳಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.