ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣಕ್ಕೆ ಗಮನ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಅಶ್ವತ್ಥನಾರಾಯಣ

Last Updated 15 ಮಾರ್ಚ್ 2022, 6:55 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿಗಳು ಆಯಾ ಶಾಲಾ ಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ಹೇಳಿದ್ದಾರೆ.

ನ್ಯಾಯಾಲಯವು ತೀರ್ಪು ನೀಡಿದ ನಂತರ ಮಾತನಾಡಿದ ಅವರು, ‘ರಾಜ್ಯ ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು’ ಎಂದಿದ್ದಾರೆ.

‘ಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು’ ಎಂದು ಸಚಿವರು ಹೇಳಿದ್ದಾರೆ.

‘ಹಿಂದೆಂದೂ ಶಾಲಾಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ಕೆಲವು ವಿಚ್ಛಿದ್ರಕಾರಿ ಶಕ್ತಿಗಳು ಬೇಕೆಂದೇ ಈ ವಿವಾದವನ್ನು ಸೃಷ್ಟಿಸಿದ್ದವು. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಅದು ಇಂದು ನೀಡಿದೆ’ ಎಂದು ಅವರು ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT