ಗುರುವಾರ , ಫೆಬ್ರವರಿ 9, 2023
30 °C

ಕಾಫಿ ಪುಡಿ ಕಲಬೆರಕೆ: ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

ಶಿಕ್ಷೆ ರದ್ದು ಕೋರಿ ಸಕಲೇಶಪುರದ ‘ಸೆಲೆಕ್ಟ್ ಕಾಫಿ ವರ್ಕ್ಸ್‌’ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಪ್ರಕರಣವೇನು?: ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್‌ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ  ಮಾರಿದ್ದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ 6 ತಿಂಗಳು ಸಜೆ ಹಾಗೂ ₹ 1 ಸಾವಿರ ದಂಡ ವಿಧಿಸಿತ್ತು. ಈ ಆದೇಶ ವನ್ನು ಎತ್ತಿ ಹಿಡಿದಿರುವ ನ್ಯಾಯಪೀಠ, ‘ಅರ್ಜಿದಾರರು 45 ದಿನಗಳಲ್ಲಿ ಸಕಲೇಶಪುರದ ಜೆಎಂಎಫ್‌ಸಿ ಕೋರ್ಟ್‌ಗೆ ಶರಣಾಗಿ ಶಿಕ್ಷೆ ಅನುಭವಿಸಬೇಕು’ ಎಂದು ತೀರ್ಪು ನೀಡಿದೆ.

‘ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಎಕ್ಸ್‌ಪೈರಿ ದಿನ, ಸಸ್ಯಾಹಾರ-ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರುವುದು ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ’ ಎಂದು ನ್ಯಾಯಪೀಠ ಎಚ್ಚರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು