ಶನಿವಾರ, ಡಿಸೆಂಬರ್ 5, 2020
25 °C

ಕಾಲೇಜು, ವಿ.ವಿ ಬೋಧಕರಿಗೆ ಮನೆಯಿಂದ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳ ಮತ್ತು ಎಲ್ಲ ವಿಶ್ವವಿದ್ಯಾಲಯಗಳ ಬೋಧಕರಿಗೆ ಬುಧವಾರದಿಂದ (ನ.4) ನ. 11ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

2020–21ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಆರಂಭಕ್ಕೆ ಅಗತ್ಯವಿರುವ ಪೂರ್ವಸಿದ್ಧತೆ (ಡಿಜಿಟಲ್‌ ಲರ್ನಿಂಗ್‌, ಆನ್‌ಲೈನ್/ಆಫ್‌ಲೈನ್‌ ಬೋಧನೆ, ಕಲಿಕಾ ಸಾಮಗ್ರಿ ತಯಾರಿ) ಮಾಡಿಕೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಾಲೇಜಿನ ತುರ್ತು ಕೆಲಸಗಳನ್ನು ನಿರ್ವಹಿಸಲು ಮತ್ತು ಪರೀಕ್ಷಾ ಕಾರ್ಯಗಳಿದ್ದರೆ ಪ್ರಾಂಶುಪಾಲರು ಸೂಚಿಸುವ ಬೋಧಕರು ಕಡ್ಡಾಯವಾಗಿ ಹಾಜರಾಗಬೇಕು ಎಂದೂ ಸುತ್ತೋಲೆ ಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.