ಶುಕ್ರವಾರ, ಮಾರ್ಚ್ 31, 2023
22 °C

ಪಿಎಸ್‌ಐ ನೇಮಕಾತಿ ಅಕ್ರಮ| ದಾಖಲೆಗಳೊಂದಿಗೆ ಬನ್ನಿ: ಪ್ರಿಯಾಂಕ್‌ಗೆ ಸಿಐಡಿ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ನೋಟಿಸ್‌ ನೀಡಿದ್ದಾರೆ.

ಈ ಬಗ್ಗೆ ಖಚಿತಪಡಿಸಿರುವ ಅವರು, ‘ಸಿಐಡಿಯವರು ಬೆಂಗಳೂರು ನಿವಾಸಕ್ಕೆ ನೋಟಿಸ್‌ ಕಳುಹಿಸಿದ್ದಾರೆ. ವಿಚಾರಣೆಗೆ ಹಾಜರಾಗುವ ಬಗ್ಗೆ ತೀರ್ಮಾನಿಸಿಲ್ಲ. ಪಕ್ಷದ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದರು.

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಮಧ್ಯೆಯೇ, ಶೀಘ್ರದಲ್ಲಿಯೇ ನಡೆಯಲಿದ್ದ 402 ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿ ಇಬ್ಬರು ಮಾತನಾಡಿದ್ದ ಆಡಿಯೊವನ್ನು ಪ್ರಿಯಾಂಕ್‌ ಕಲಬುರಗಿಯಲ್ಲಿ ಶನಿವಾರ ಬಿಡುಗಡೆ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು