ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 19ಕ್ಕೆ ಕಾಮೆಡ್‌–ಕೆ ಪ್ರವೇಶ ಪರೀಕ್ಷೆ

Last Updated 15 ಮಾರ್ಚ್ 2022, 13:35 IST
ಅಕ್ಷರ ಗಾತ್ರ

ಬೆಂಗಳೂರು: ಕಾಮೆಡ್‌–ಕೆ ಯುಜಿಇಟಿ ಮತ್ತು ಯೂನಿ–ಗೇಜ್‌ ಪ್ರವೇಶ ಪರೀಕ್ಷೆ ಈ ವರ್ಷದ ಜೂನ್‌ 19 ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಕಾಮೆಡ್‌–ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಸ್‌.ಕುಮಾರ್‌, ‘ದೇಶದ 150ಕ್ಕೂ ಹೆಚ್ಚು ನಗರಗಳ 400ಕ್ಕೂ ಅಧಿಕ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಯಲಿದ್ದು, ಈ ಬಾರಿ ಒಟ್ಟು 80 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು www.comedk.org ಅಥವಾ www.uniguage.com ಮೂಲಕ ಇದೇ 14 ರಿಂದ ಮೇ 2ರವರೆಗೆ ಅರ್ಜಿ ಸಲ್ಲಿಸಬಹುದು’ ಎಂದರು.

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‌ಇಪಿ) ಪೂರಕವಾಗಿ ನಾವು ‘ಕಾಮೆಡ್‌ ಕೇರ್ಸ್‌’ ಹೆಸರಿನಡಿ ಸುಧಾರಿತ ಕೌಶಲ ಕೇಂದ್ರಗಳನ್ನು ಆರಂಭಿಸುತ್ತಿದ್ದೇವೆ. ಕಲಬುರಗಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಹಾಸನ, ಮೈಸೂರು, ಬೆಂಗಳೂರು ಹಾಗೂ ದಕ್ಷಿಣ ಕನ್ನಡದಲ್ಲಿ ಇವು ಕಾರ್ಯನಿರ್ವಹಿಸುತ್ತವೆ. ಗ್ರಾಮೀಣ ಭಾಗದ ಹಾಗೂ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನಗಳ ಬಗೆಗೆ ಅಗತ್ಯ ಜ್ಞಾನ ಒದಗಿಸುವುದು, ಆ ಮೂಲಕ ಅವರನ್ನು ಉದ್ಯೋಗಕ್ಕೆ ಅಣಿಗೊಳಿಸುವುದು ಈ ಕೇಂದ್ರಗಳ ಉದ್ದೇಶ’ ಎಂದು ಮಾಹಿತಿ ನೀಡಿದರು.

‘ಕಾಮೆಡ್‌–ಕೆ ಅಧೀನಕ್ಕೊಳಪಡುವ 10 ರಿಂದ 12 ಕಾಲೇಜುಗಳನ್ನು ಕೌಶಲ ಕೇಂದ್ರವೊಂದರ ಜೊತೆ ವಿಲೀನಗೊಳಿಸಲಾಗುತ್ತದೆ. ‘ಸ್ಕಿಲ್‌ ಲ್ಯಾಬ್‌’ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಬೆಳೆಸಲಾಗುತ್ತದೆ. ಕೃತಕ ಬುದ್ಧಿಮತ್ತೆ ಬಗ್ಗೆಯೂ ಅರಿವು ಮೂಡಿಸಲಾಗುತ್ತದೆ’ ಎಂದು ಹೇಳಿದರು.

ಇ.ಆರ್‌.ಎ.ಫೌಂಡೇಷನ್‌ನ ಸಿಇಒ ಪಿ.ಮುರಳೀಧರ, ‘ವೃತ್ತಿಪರ ಶಿಕ್ಷಣ ಪಡೆಯಲು ಇಚ್ಛಿಸುವವರಿಗಾಗಿ ನಾವು ‘ಮಾರ್ಗ್‌’ ಕಾರ್ಯಕ್ರಮದ ಮೂಲಕ ವಿಷಯ ಜ್ಞಾನ ಒದಗಿಸುತ್ತಿದ್ದೇವೆ. ಇದಕ್ಕಾಗಿ ವಿದ್ಯಾರ್ಥಿಯು ₹1 ಸಾವಿರ ಶುಲ್ಕ ಕಟ್ಟಬೇಕು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಇದು ಉಚಿತ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT