ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮೆಡ್-ಕೆ ‘ಯುಜಿಇಟಿ- 2022’ ಪರೀಕ್ಷೆ ಸುಸೂತ್ರ

Last Updated 19 ಜೂನ್ 2022, 20:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ‘ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ’ದ (ಕಾಮೆಡ್-ಕೆ) ‘ಯುಜಿಇಟಿ-2022’ ಪರೀಕ್ಷೆ ಭಾನುವಾರ ಆನ್‌ಲೈನ್ ಮೂಲಕ ದೇಶಾದ್ಯಂತ ಯಶಸ್ವಿಯಾಗಿ ಜರುಗಿತು.‌ಜುಲೈ 5 ರಂದು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

‌ರಾಜ್ಯದ 22 ಸೇರಿದಂತೆ ದೇಶದಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಭಾನುವಾರ ಭಾನುವಾರ ಬೆಳಿಗ್ಗೆ 9 ರಿಂದ 12 ಮತ್ತು ಮಧ್ಯಾಹ್ನ 2.30 ರಿಂದ 5.30 ರವರೆಗೆ ಪರೀಕ್ಷೆ ನಡೆಯಿತು. ರಾಜ್ಯದ 150 ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಸುಮಾರು 20 ಸಾವಿರ ಸೀಟುಗಳು ಹಾಗೂ ದೇಶದ ವಿವಿಧ 40 ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಕಾಮೆಡ್-ಕೆ ಅರ್ಹತಾ ಪರೀಕ್ಷೆ‌ಯಾಗಿದೆ.

ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 61,635 ಅಭ್ಯರ್ಥಿಗಳ ಪೈಕಿ, ಬೆಳಗ್ಗಿನ ಅವಧಿಯಲ್ಲಿ ನಡೆದ ಪತ್ರಿಕೆ–1ಕ್ಕೆ ಶೇ 94.28 ಮತ್ತು ಮಧ್ಯಾಹ್ನ ನಡೆದ ಪತ್ರಿಕೆ-2 ಕ್ಕೆ ಶೇ 92.64 ಅಭ್ಯರ್ಥಿಗಳು ಹಾಜರಾಗಿದ್ದರು.

’ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಯನ್ನು ನಡೆಸಲಾಯಿತು. ಪರೀಕ್ಷೆ ವೇಳೆ ಯಾವುದೇ ಗೊಂದಲಗಳು ಉಂಟಾಗಿಲ್ಲ’ ಎಂದು ಕಾಮೆಡ್–ಕೆ ಕಾರ್ಯನಿರ್ವಾಹಕ ನಿರ್ದೇ ಶಕ ಡಾ.ಎಸ್. ಕುಮಾರ್ ತಿಳಿಸಿದ್ದಾರೆ.

‘ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಇದೇ 22 ರಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಅಂತಿಮ ಉತ್ತರಗಳನ್ನು 30 ರಂದು ಪ್ರಕಟಿಸಲಾಗುವುದು’ ಎಂದೂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT