ಶುಕ್ರವಾರ, ಆಗಸ್ಟ್ 12, 2022
20 °C

ಆಮ್ ಆದ್ಮಿ ಪಕ್ಷ ಸೇರಿದ ಹಾಸ್ಯ ನಟ ಟೆನ್ನಿಸ್‌ ಕೃಷ್ಣ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಂದನವನದ ಹಾಸ್ಯ ನಟ ಟಿನ್ನಿಸ್ ಕೃಷ್ಣ ಅವರು ಗುರುವಾರ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಯಾಗಿದ್ದಾರೆ. 

ಪಂಜಾಬ್‌ ಮತ್ತು ದೆಹಲಿಯಲ್ಲಿ ಸರ್ಕಾರ ರಚನೆ ಮಾಡಿರುವ ಎಎಪಿಗೆ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬರಮಾಡಿಕೊಂಡರು. 

ಪಕ್ಷಕ್ಕೆ ಸೆರ್ಪಡೆಯಾದ ಬಳಿಕ ಟೆನ್ನಿಸ್‌ ಕೃಷ್ಣ ಮಾತನಾಡಿ ‘ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರಿಲ್ಲ. ಜನಸೇವೆಗಾಗಿ ಸೇರಿದ್ದೇನೆ’ ಎಂದು ಹೇಳಿದರು. ಈ ಹಿಂದೆ ಮತ್ತೊಬ್ಬ ಹಾಸ್ಯನಟ ಮುಖ್ಯಮಂತ್ರಿ ಚಂದ್ರು ಕೂಡ ಎಎಪಿ ಸೇರಿದ್ದಾರೆ. 

ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೃಥ್ವಿ ರೆಡ್ಡಿ ಸೇರಿದಂತೆ ಪಕ್ಷದ ಅನೇಕ ಮುಖಂಡರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು