ಸೋಮವಾರ, ಆಗಸ್ಟ್ 8, 2022
23 °C

ವಾಣಿಜ್ಯ ತೆರಿಗೆ ಇಲಾಖೆ ಹಗರಣ ಬಯಲಿಗೆಳೆದ ಉಪಾಸೆಗೆ 5 ತಿಂಗಳಲ್ಲಿ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ವಾಣಿಜ್ಯ ತೆರಿಗೆ ಇಲಾಖೆಯ ಇಲ್ಲಿನ ಕಚೇರಿಯಲ್ಲಿನ ಟಿಡಿಎಸ್ ಫಾರಂ ದುರ್ಬಳಕೆ ಮಾಡಿಕೊಂಡು ಕೋಟಿಗಟ್ಟಲೇ ಹಣ ಲೂಟಿ ಮಾಡಿದ್ದ ಹಗರಣ ಬಯಲಿಗೆ ಎಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಇಲಾಖೆಯ ಜಂಟಿ ಆಯುಕ್ತ ಸಂಗಮೇಶ ಉಪಾಸೆ ಅವರಿಗೆ ಐದೇ ತಿಂಗಳಲ್ಲಿ ಬೆಂಗಳೂರಿಗೆ ವರ್ಗಾವಣೆಯಾಗಿದೆ.

ಇಲ್ಲಿನ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ‘ಟಿಡಿಎಸ್‌ ಮರುಪಾವತಿ’ ನೆಪದಲ್ಲಿ ಕೋಟ್ಯಂತರ ಹಣ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಪಂಡರಿನಾಥ, ಹೊರಗುತ್ತಿಗೆ ನೌಕರ ಮೊಹಮ್ಮದ್ ರಹೀಲ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

‘ಮೆ.ರಿದನಾಲ್‌ ವಾಟರ್‌ ಪ್ಯುರಿಫಯರ್ ಎಂಬ ನಕಲಿ ಸಂಸ್ಥೆ ಹುಟ್ಟುಹಾಕಿ, ಈವರೆಗೆ ₹ 2 ಕೋಟಿಗೂ ಅಧಿಕ ಹಣ ಕಬಳಿಸಿದ್ದನ್ನು ಸಂಗಮೇಶ ಉಪಾಸೆ ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಮುಂದಾಗಿದ್ದರು. ಅಷ್ಟರಲ್ಲಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ, ಕೇಂದ್ರ ಕಚೇರಿಯಲ್ಲಿ ಕಾನೂನು ವ್ಯವಹಾರಗಳ ಜಂಟಿ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು