ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಹೊಳಪು ಕೊಡಲು ಸಮಿತಿ ರಚಿಸಿದ ಸರ್ಕಾರ

Last Updated 1 ಡಿಸೆಂಬರ್ 2021, 16:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪುನರ್‌ ವಿನ್ಯಾಸ, ಸುಧಾರಣೆ ಮತ್ತು ಆರ್ಥಿಕ ಸ್ವಾವಲಂಬನೆ ತರುವ ಕುರಿತು ಅಧ್ಯಯನ ನಡೆಸಲು ನಿವೃತ್ತ ಐಎಎಸ್‌ ಅಧಿಕಾರಿ ಎಂ.ಆರ್‌. ಶ್ರೀನಿವಾಸಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಾರಿಗೆ ಇಲಾಖೆ ಮಂಗಳವಾರ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NEKRTC) ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳಲ್ಲಿ (NWKRTC)ಸುಧಾರಣೆ ತರುವ ಕುರಿತು ಸಮಿತಿ ಅಧ್ಯಯನ ನಡೆಸಿ, ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕು.

ನಾಲ್ಕೂ ಸಂಸ್ಥೆಗಳ ಪುನರ್‌ ವಿನ್ಯಾಸ, ಜಮೀನು, ಕಟ್ಟಡ ಸೇರಿದಂತೆ ಸ್ಥಿರಾಸ್ತಿಗಳನ್ನು ವಿಲೇವಾರಿ ಮಾಡಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸುವುದು ಮತ್ತು ಸಾರಿಗೆ ಕ್ಷೇತ್ರದ ಕಾರ್ಯಕ್ಷಮತೆ ಹೆಚ್ಚಿಸುವ ಕುರಿತು ಸಮಿತಿ ಅಧ್ಯಯನ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT