ಬುಧವಾರ, ಮಾರ್ಚ್ 22, 2023
32 °C

ಅನುದಾನಿತ ಶಾಲಾ ಸಿಬ್ಬಂದಿಗೆ ಸೌಲಭ್ಯ: ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಹಾಗೂ ನಿವೃತ್ತ ಸಿಬ್ಬಂದಿ ಬೇಡಿಕೆ ಈಡೇರಿಕೆಗೆ ತಗುಲಬಹುದಾದ ಆರ್ಥಿಕ ವೆಚ್ಚವನ್ನು ಅಂದಾಜಿಸಿ, ವರದಿ ಸಲ್ಲಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ, ಆರು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಅನುದಾನಕ್ಕೆ ಒಳಪಡುವ ಮೊದಲು ಸಲ್ಲಿಸಿದ ಸೇವೆಯ ಅವಧಿ ಪರಿಗಣಿಸಿ ಕಾಲ್ಪನಿಕ ವೇತನ ನಿಗದಿ ಮಾಡುವುದು, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು, ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡಿಸುವ ಕುರಿತು ನಿಖರ ಮಾಹಿತಿ ಮತ್ತು ದತ್ತಾಂಶಗಳನ್ನು  ಸಂಗ್ರಹಿಸಿ, ಆರ್ಥಿಕ ವೆಚ್ಚವನ್ನು ಒಳಗೊಂಡ ವರದಿಯನ್ನು 30 ದಿನಗಳ ಒಳಗೆ ಸಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು