ಗುರುವಾರ , ಅಕ್ಟೋಬರ್ 28, 2021
19 °C

ಸಿಇಟಿ ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28 ಮತ್ತು 29 ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ (ಸೆ. 20) ಸಂಜೆ 4 ಗಂಟೆಗೆ ಪ್ರಕಟವಾಗಲಿದೆ.

‘ದಾಖಲೆಯ ಅತ್ಯಲ್ಪ ಕಾಲಾವಧಿಯಲ್ಲಿ ಫಲಿತಾಂಶ ಪ್ರಕಟವಾಗುತ್ತಿದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತ ಶ್ರಮಿಸಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಿಇಟಿ ಫಲಿತಾಂಶ ಸಂಜೆ 4 ಗಂಟೆಯ ಬಳಿಕ ಈ ಲಿಂಕ್ (https://cetonline.karnataka.gov.in/kea/) ಲಭ್ಯವಾಗಲಿದೆ.

ದ್ವಿತೀಯ ಪಿಯು ಫಲಿತಾಂಶ
ದ್ವಿತೀಯ ಪಿಯುಸಿ ಖಾಸಗಿ (17,470) ಮತ್ತು ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು (592) ಹಾಗೂ ಪುನರಾವರ್ತಿತ (351) ಸೇರಿ ಒಟ್ಟು 18,413 ವಿದ್ಯಾರ್ಥಿಗಳ ಫಲಿತಾಂಶ ಬೆಳಿಗ್ಗೆ 10.30 ಕ್ಕೆ ಪ್ರಕಟವಾಗಲಿದೆ. ಆಗಸ್ಟ್‌– ಸೆಪ್ಟೆಂಬರ್‌ನಲ್ಲಿ ವಾರ್ಷಿಕ ಪರೀಕ್ಷೆ ನಡೆದಿತ್ತು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಫಲಿತಾಂಶ ಪ್ರಕಟಿಸುವರು. ಈ ಲಿಂಕ್‌ನಲ್ಲಿ www.karresults.nic.in ಫಲಿತಾಂಶ ಸಿಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು