ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕೇ: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

Last Updated 22 ಏಪ್ರಿಲ್ 2022, 9:14 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ –ಬಿಜೆಪಿ ನಾಯಕರ ಮಧ್ಯೆ ಪರಸ್ಪರ ವಾಗ್ದಾಳಿ, ಕೆಸರೆರಚಾಟ ಜೋರಾಗಿದೆ.

ಹುಬ್ಬಳ್ಳಿ ಗಲಭೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದೆ.

‘ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ‌ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂತಹ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ, ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು, ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ’ ಎಂದು ಬಿಜೆಪಿ ಗುಡುಗಿದೆ.

‘ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ, ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ?, ಆ ರಿಂಗ್‌ ಮಾಸ್ಟರ್‌ #ಮಹಾನಾಯಕ ಆಗಿರಬಹುದೇ ಅಥವಾ #ಮೀರ್‌ಸಾದಿಕ್ ಆಗಿರಬಹುದೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನವಾಗಿದೆ. #CONgressSupportsJihadis ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಬಿಜೆಪಿ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT