ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕರ್ತವ್ಯ: ಮೃತಪಟ್ಟವರಿಗೆ ₹30 ಲಕ್ಷ ಪರಿಹಾರ

Last Updated 7 ಆಗಸ್ಟ್ 2020, 19:46 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಕರ್ತವ್ಯದಲ್ಲಿ ತೊಡಗುವ ರಾಜ್ಯ ಸರ್ಕಾರದ ಯಾವುದೇ ಇಲಾಖೆಯ ನೌಕರರು ಒಂದು ವೇಳೆ ಕೋವಿಡ್‌ನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ನಿರ್ವಹಣೆ ಕರ್ತವ್ಯದಲ್ಲಿ ತೊಡಗಿದ್ದಾಗ ಕೋವಿಡ್‌–19 ಸೋಂಕಿಗೆ ಒಳಗಾಗುವ ನೌಕರರ ಚಿಕಿತ್ಸಾ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ.

ಕೋವಿಡ್ ಸೇನಾನಿಗಳಿಗೆ ಮಾತ್ರ ಈ ಸೌಲಭ್ಯ ಇತ್ತು. ಈಗ ಎಲ್ಲ ಇಲಾಖೆಯ ನೌಕರರನ್ನೂ ಈ ಕೆಲಸದಲ್ಲಿ ತೊಡಗಿಸಿಕೊಳ್ಳಲಾಗಿದೆ. ಎಲ್ಲರಿಗೂ ಚಿಕಿತ್ಸಾ ವೆಚ್ಚ ಹಾಗೂ ವಿಮಾ ಮೊತ್ತದ ಸೌಲಭ್ಯ ನೀಡುವಂತೆಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ‌ದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT