ಶನಿವಾರ, ಅಕ್ಟೋಬರ್ 1, 2022
23 °C

ಸ್ಪರ್ಧಾತ್ಮಕ ಪರೀಕ್ಷೆ: ಇಂದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕರ್ನಾಟಕ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ಆಗಸ್ಟ್‌ 19ರಂದು ‘ನೊಂದ ಯುವಜನತೆಯ ನಡೆ ರಾಜಭವನದ ಕಡೆ’ ಎಂಬ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ಸಂಚಾಲಕಿ ಭವ್ಯ ನರಸಿಂಹಮೂರ್ತಿ ತಿಳಿಸಿದರು. 

‘ಹಂಪಿನಗರದಲ್ಲಿರುವ ಕೇಂದ್ರೀಯ ಗ್ರಂಥಾಲಯದಿಂದ ರಾಜಭವನದವರೆಗೂ ಜಾಥಾ ನಡೆಯಲಿದ್ದು, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

‘ಕೆಪಿಎಸ್‌ಸಿ ನಡೆಸುವ ಎಲ್ಲಾ ನೇಮಕಾತಿಗಳನ್ನು ತ್ವರಿಗತಿಯಲ್ಲಿ ನಡೆಸಬೇಕು. ಮುಂಬರುವ ನೇಮಕಾತಿಗಳನ್ನು ಪೂರ್ವಯೋಜಿತ ವೇಳಾಪಟ್ಟಿಯೊಂದಿಗೆ ಆಯೋಜಿಸಬೇಕು. ಕೇಂದ್ರ ಲೋಕಸೇವಾ ಆಯೋಗ ಮಾದರಿಯ ಪರೀಕ್ಷಾ ಪ್ರಕ್ರಿಯೆಗಳ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಬೇಕು. ರಾಜ್ಯದಲ್ಲಿ ಖಾಲಿ ಇರುವ 2.44 ಲಕ್ಷ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ ಹೊರಡಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು