ಶನಿವಾರ, ಸೆಪ್ಟೆಂಬರ್ 25, 2021
29 °C

ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು: ಪಿಐಎಲ್‌ ಪರಿಗಣಿಸಲು ಹೈಕೋರ್ಟ್ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಖಾಸಗಿ ದೂರು ರದ್ದುಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಂ ಸಲ್ಲಿಸಿದ್ದ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಲು ಹೈಕೋರ್ಟ್ ನಿರಾಕರಿಸಿದೆ. ‌

ಶಾಸಕ ಬಿ.ಎಸ್. ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಮತ್ತು ಇತರರ ವಿರುದ್ಧದ ಭ್ರಷ್ಟಾಚಾರ ಆರೋಪದ ಕುರಿತು ತನಿಖೆ ನಡೆಸಲು ಎಸ್‌ಐಟಿ ನೇಮಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಟಿ.ಜೆ. ಅಬ್ರಹಂ ಕೋರಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಸಲ್ಲಿಸಿದ್ದ ದೂರು ಆಧರಿಸಿ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯಕ್ಕೆ ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಖಾಸಗಿ ದೂರನ್ನೂ ನ್ಯಾಯಾಲಯ ವಜಾಗೊಳಿತ್ತು.

‘ಅರ್ಜಿದಾರರು ಕೋರಿರುವಂತೆ ಯಾವುದೇ ತನಿಖೆಗೆ ವಹಿಸಲು ಮೊದಲನೆಯದಾಗಿ ಎಫ್‌ಐಆರ್‌ ಕೂಡ ದಾಖಲಾಗಿಲ್ಲ. ರಿಟ್ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಲು ಆಗುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು