ಮೈಸೂರು: ‘ಕೋಮುಗಲಭೆಯನ್ನು ಪ್ರಚೋದಿಸುವಂಥ ಹೇಳಿಕೆ ನೀಡಿರುವ ಸಂಸದ ಪ್ರತಾಪಸಿಂಹ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ದೂರು ಸಲ್ಲಿಸಿದರು.

‘ದೇವರಾಜ ಅರಸು ರಸ್ತೆಯಲ್ಲಿರುವ ದರ್ಗಾ ಹಾಗೂ ಇರ್ವಿನ್ ರಸ್ತೆಯಲ್ಲಿರುವ ಮಸೀದಿಯನ್ನು ಒಡೆದು ಹಾಕ
ಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಸಭೆಯಲ್ಲಿ ಧಮ್ಕಿ ಹಾಕಿದ್ದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲೇ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಸಮುದಾಯಗಳ ನಡುವೆ ಕಿಚ್ಚು ಹಚ್ಚಿಸುವಂತಹ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಆಗ್ರಹಿಸಿದರು.

‘ಪ್ರತಾಪಸಿಂಹ ವಿರುದ್ಧ ಕಾನೂನು ಕ್ರಮ ಜರುಗಿಸದೆ, ಮುಂದೆ ಕೋಮುಗಲಭೆ ನಡೆದರೆ ಜಿಲ್ಲಾಡಳಿತವೇ ಹೊಣೆಯಾಗಬೇಕಾಗುತ್ತದೆ’ ಎಂದು ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ, ಮಂಜುಳಾ ಮಾನಸ ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.