ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ: ಈಶ್ವರಪ್ಪ, ಪರಮೇಶ್ವರ ವಿರುದ್ಧ ದೂರು

Last Updated 12 ಜೂನ್ 2021, 16:34 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ. ಪರಮೇಶ್ವರ ವಿರುದ್ಧ ಸಾಮಾಜಿಕ ಹೋರಾಟಗಾರ ಎಚ್‌.ಎಂ. ವೆಂಕಟೇಶ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ.

ಇದೇ 10ರಂದು ತಮ್ಮ ಜನ್ಮದಿನದ ಸಂದರ್ಭದಲ್ಲಿ ಈಶ್ವರಪ್ಪ ಅವರು ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಪರಮೇಶ್ವರ ಅವರು ಇತ್ತೀಚೆಗೆ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಪಡಿತರ ಕಿಟ್‌ ವಿತರಣಾ ಕಾರ್ಯಕ್ರಮ ನಡೆಸಿದ್ದರು.

ಎರಡೂ ಸಂದರ್ಭಗಳಲ್ಲಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂದು ದೂರಿರುವ ವೆಂಕಟೇಶ್, ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಡಿ ಈಶ್ವರಪ್ಪ ಮತ್ತು ಪರಮೇಶ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT