ಕೆಎಸ್‌ಆರ್‌ಟಿಸಿ ಹೆಸರಲ್ಲಿ ನಕಲಿ ನೇಮಕಾತಿ ಜಾಹೀರಾತು: ದೂರು ದಾಖಲು

ಶಿವಮೊಗ್ಗ: ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಸಂಸ್ಥೆಯ ಹೆಸರಿನಲ್ಲಿ ನಕಲಿ ನೇಮಕಾತಿಯ ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಅರ್‌ಟಿಸಿ) ಸಿಬ್ಬಂದಿ ಜಿ.ಕೆ.ಮರಿಗೌಡ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರಂನ ಸನ್ಮಾರ್ಗ ಮಾನವ ಸಂಪನ್ಮೂಲ ಏಜೆನ್ಸಿ ಹೆಸರಿನಲ್ಲಿ ನವೆಂಬರ್ 11ರಂದು ಪತ್ರಿಕೆಯಲ್ಲಿ ನೇಮಕಾತಿ ಬಗ್ಗೆ ಜಾಹೀರಾತು ನೀಡಲಾಗಿದೆ.
’ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಹಾಗೂ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಲು 650 ಚಾಲಕರು ಬೇಕಾಗಿದ್ದಾರೆ. ಕಾಯಂ ನೌಕರಿ ಇದಾಗಿದ್ದು, ಆರಂಭದಲ್ಲಿ ಪ್ರತಿಯೊಬ್ಬ ಆಕಾಂಕ್ಷಿಯೂ ₹25000 ತುಂಬಬೇಕು. ನಂತರ ಅದನ್ನು ವಾಪಸ್ ನೀಡಲಾಗುವುದು ಎಂದು ಜಾಹೀರಾತು ನೀಡಲಾಗಿದೆ. ಸಂಸ್ಥೆಯಿಂದ ಅಧಿಕೃತವಾಗಿ ಯಾವುದೇ ನೇಮಕಾತಿ ಆದೇಶ ಹೊರಡಿಸಿಲ್ಲ. ನೌಕರಿ ಅಮಿಷ ಒಡ್ಡಿ ಹಣ ಸಂಗ್ರಹಣೆ ಮಾಡಿ ವಂಚಿಸುವ ಉದ್ದೇಶದಿಂದ ಜಾಹೀರಾತು ನೀಡಲಾಗಿದೆ. ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ‘ ಎಂದು ಮರಿಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ದೊಡ್ಡಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.