ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಪ್ಯೂಟರ್‌ ಸಾಕ್ಷರತೆ: ಗಡುವು ವಿಸ್ತರಣೆ

Last Updated 25 ಜನವರಿ 2023, 15:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಧಿಸಿದ್ದ ಗಡುವುನ್ನು 2023ರ ಡಿಸೆಂಬರ್‌ 31ರವರೆಗೂ ವಿಸ್ತರಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿರ್ಧರಿಸಿದ್ದು, ಕರ್ನಾಟಕ ನಾಗರಿಕ ಸೇವೆ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) ನಿಯಮಗಳಿಗೆ ತಿದ್ದುಪಡಿ ತರಲು ಕರಡನ್ನು ಬುಧವಾರ ಪ್ರಕಟಿಸಲಾಗಿದೆ.

ಈಗ ಜಾರಿಯಲ್ಲಿರುವ ನಿಯಮಗಳ ಪ್ರಕಾರ, ರಾಜ್ಯ ಸರ್ಕಾರಿ ನೌಕರರು 2022ರ ಡಿಸೆಂಬರ್‌ 31ರೊಳಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿತ್ತು. ಅದನ್ನು 2023ರ ಡಿಸೆಂಬರ್‌ 31ರ ಒಳಗಾಗಿ ಎಂಬ ತಿದ್ದುಪಡಿ ತರುವ ಪ್ರಸ್ತಾವ ಕರಡಿನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT