ಭಾನುವಾರ, ಜನವರಿ 24, 2021
18 °C

ಆರ್‌.ಎನ್. ಶೆಟ್ಟಿಗೆ ಶ್ರದ್ಧಾಂಜಲಿ ಸಲ್ಲಿಸಿದ ಗಣ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ ಅವರಿಗೆ ವಿವಿಧ ಕ್ಷೇತ್ರದ ಗಣ್ಯರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದರು.

ನಗರದ ಚನ್ನಸಂದ್ರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಏರ್ಪಡಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಕುಟುಂಬದ ಸದಸ್ಯರು, ಒಡನಾಡಿಗಳು, ಸ್ನೇಹಿತರು ಹಾಗೂ ಸಂಬಂಧಿಗಳು ಪಾಲ್ಗೊಂಡಿದ್ದರು. ವೈದ್ಯರಾದ ಡಾ. ತಿಮ್ಮಪ್ಪ ಭಟ್, ಡಾ. ಸುದರ್ಶನ್ ಬಲ್ಲಾಳ್, ಡಾ. ಪಾಲ್ ಕ್ರಿಷ್ಟೊದಾಸ್, ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ನಿವೃತ್ತ ಐಎಎಸ್ ಅಧಿಕಾರಿ ಎಸ್‌.ವಿ. ರಂಗನಾಥ್, ಕೆ.ಎಲ್‌.ಇ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಕೋರೆ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಸೇರಿದಂತೆ ಹಲವರು ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು. 

ಪ್ರಭಾಕರ ಕೋರೆ, ‘ಆರ್‌.ಎನ್. ಶೆಟ್ಟಿ ಅವರು ಹುಬ್ಬಳ್ಳಿ ಬಿಟ್ಟು ಬೆಂಗಳೂರಿಗೆ ಬಂದ ಬಳಿಕ ಉತ್ತರ ಕರ್ನಾಟಕದ ಭಾಗಕ್ಕೆ ಒಂದು ಕೊರತೆ ಉಂಟಾಗಿತ್ತು. ಅವರು ಹುಬ್ಬಳ್ಳಿಯಲ್ಲಿಯೇ ಇದ್ದಿದ್ದರೆ ಆ ಭಾಗದ ಜನತೆಗೆ ಹೆಚ್ಚು ಲಾಭವಾಗುತ್ತಿತ್ತು’ ಎಂದರು.

ಶಂಕರ್ ಬಿದರಿ ಮಾತನಾಡಿ, ‘ರಾಮಕೃಷ್ಣ ಹೆಗಡೆ ಅವರು ಆರ್.ಎನ್. ಶೆಟ್ಟಿ ಅವರನ್ನು ನನಗೆ ಮೊದಲು ಪರಿಚಯಿಸಿದರು. ಅವರೊಂದಿಗೆ ನಿರಂತರ ಒಡನಾಟ ಹೊಂದಿದ್ದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು