ಶನಿವಾರ, ಅಕ್ಟೋಬರ್ 1, 2022
20 °C
ಹತ್ಯೆ ಪ್ರಕರಣ

ಆಸ್ತಿ ಮುಟ್ಟುಗೋಲು; ಮೌನ ಏಕೆ?: ಎಡಿಜಿಪಿಗೆ ಶಾಸಕ ಯು.ಟಿ.ಖಾದರ್ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಹೇಳಿದಂತೆ, ಕೋಮು ದ್ವೇಷಕ್ಕೆ ಕೊಲೆಯಾದ ಫಾಝಿಲ್, ಮಸೂದ್ ಇನ್ನಿತರ ಕೊಲೆ ಪ್ರಕರಣಗಳ ಆರೋಪಿಗಳ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಳ್ಳುವ ವಿಚಾರದಲ್ಲಿ ಮೌನ ಏಕೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಅವರು ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಈ ಸಂಬಂಧ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ಖಾದರ್, ‘ಇದು ನಾಗರಿಕ ಸಮಾಜದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ. ಈ ಅನುಮಾನ ಬಗೆಹರಿಸಿ, ಪೊಲೀಸ್‌ ಇಲಾಖೆಯ ಮೇಲೆ ವಿಶ್ವಾಸ ಬರುವಂಥ ಉತ್ತರವನ್ನು ನಿಮ್ಮಿಂದ ನಿರೀಕ್ಷಿಸಿದ್ದೇನೆ’ ಎಂದಿದ್ದಾರೆ.

‘ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಆರೋಪಿಗಳನ್ನು ಬಂಧಿಸಲು, ಅವರನ್ನು ಕಾನೂನು ಕ್ರಮಕ್ಕೆ ಒಳಪಡಿಸಲು ಮತ್ತು ಕೊಲೆಗಳ ಸರಣಿ ಮುಂದುವರಿಯದಂತೆ ತಡೆಯಲು ಪೊಲೀಸ್ ಇಲಾಖೆ ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ. ಕೊಲೆ, ಸಮಾಜದಲ್ಲಿ ಭಯವನ್ನು ಹುಟ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಎಲ್ಲರ ಬೆಂಬಲ ಇದೆ. ಪ್ರವೀಣ್ ಪ್ರಕರಣಕ್ಕೆ ಸಂಬಂಧಿಸಿ ಕೈಗೊಂಡ ದಿಟ್ಟ ಕ್ರಮವನ್ನು ಫಾಝಿಲ್, ಮಸೂದ್ ಪ್ರಕರಣಕ್ಕೂ ಅನ್ವಯಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

*

ನಮ್ಮ ಕನ್ನಡದ ಮನಗಳ ಕಾರ್ಯ ಹರಸಿದ ಪ್ರಧಾನಿಗಳಿಗೆ ಧನ್ಯವಾದ. ನಮ್ಮ ಕಾರ್ಯವನ್ನು ಗುರುತಿಸಿರುವುದು ಉತ್ಸಾಹವನ್ನು ಇಮ್ಮಡಿಗೊಳಿಸಿದೆ.
-ಜಗ್ಗೇಶ್‌, ನಟ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು