ಗುರುವಾರ , ಜೂನ್ 30, 2022
27 °C

ಗುಂಪುಗಳ ನಡುವೆ ಮಾರಾಮಾರಿ; 9 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಟಗಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಅಕ್ರಮ ಮರಳು ಮಾರಾಟ ಮತ್ತು ಹಣ ಹಂಚಿಕೆ ವಿಷಯದಲ್ಲಿ ಪರಿಶಿಷ್ಟ ಜಾತಿ ಮತ್ತು ನಾಯಕ ಸಮುದಾಯಗಳ ನಡುವೆ ಮಾರಾಮಾರಿಯಾಗಿದ್ದು, ಪರಿಶಿಷ್ಟ ಜಾತಿಯ 9 ಮಂದಿ ಗಾಯಗೊಂಡಿದ್ದಾರೆ. ಎರಡೂ ಗುಂಪಿನವರು ಬಡಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಪರಿಶಿಷ್ಟ ಜಾತಿಯ ದೇವಣ್ಣ ಹಾವಣ್ಣ ಮಾದಿಗ ಎಂಬುವರು 69 ಜನರ ವಿರುದ್ಧ ಜಾತಿ ನಿಂದನೆ ದೂರು ನೀಡಿದ್ದಾರೆ. ಲಿಂಗಾಯತ, ಉಪ್ಪಾರ ಜನಾಂಗದ ತಲಾ ಒಬ್ಬರು ಮತ್ತು 67 ನಾಯಕ ಸಮುದಾಯದವರ ವಿರುದ್ಧ ಪ್ರಕರಣ ದಾಖಲಾಗಿದೆ. 16 ಆರೋಪಿಗಳನ್ನು ಬಂಧಿಸಲಾಗಿದೆ. ಗ್ರಾಮದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಿಗಾ ವಹಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಇಡೀ ದಿನ ಕಾರಟಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಪರಿಶಿಷ್ಟ ಜಾತಿ ಸಮುದಾಯದವರು,‘ಪ್ರಕರಣದ ಎಲ್ಲಾ 69 ಜನರನ್ನೂ ಬಂಧಿಸಬೇಕು. ನಮಗೆ ಅನ್ಯಾಯವಾಗಿದೆ. ನಮ್ಮ ವಿರುದ್ಧ  ದೂರು ಸ್ವೀಕರಿಸಬಾರದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.