ಬುಧವಾರ, ಜನವರಿ 19, 2022
23 °C

ದೇಶಕ್ಕೆ ಹಿಡಿದ ಗ್ರಹಣ ಕಾಂಗ್ರೆಸ್‌: ಸಾರಿಗೆ ಸಚಿವ ಬಿ.ಶ್ರೀರಾಮುಲು ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕಾಂಗ್ರೆಸ್‌ ಪಕ್ಷವು ದೇಶಕ್ಕೆ ಹಿಡಿದ ಗ್ರಹಣ ಇದ್ದಂತೆ. ಸೂರ್ಯ, ಚಂದ್ರ ಗ್ರಹಣದಂತೆ ಆ ಪಕ್ಷದ ನಾಯಕರು ಆಗಾಗ ಕ್ಷೇತ್ರಕ್ಕೆ ಬಂದು ಹೋಗುತ್ತಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್‌ ಗ್ರಹಗಳಂತೆ ಕಾಡುತ್ತಿದೆ. ಅಭಿವೃದ್ಧಿಗೆ ಕಾಂಗ್ರೆಸ್‌ ತಡೆಗೋಡೆಯಾಗಿದ್ದು, ಇಡೀ ದೇಶಕ್ಕೆ ಮಾರಕವಾಗಿದೆ’ ಎಂದು ಕುಟುಕಿದರು.

‘ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಸ್ತಿತ್ವ ಉಳಿಸಿಕೊಳ್ಳಲು ಹರಸಾಹಸಪಡುತ್ತಿದೆ. 25 ಕ್ಷೇತ್ರಗಳ ಪೈಕಿ ಬಿಜೆಪಿ 15 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು