ಸಚಿವ ಎಸ್.ಟಿ.ಸೋಮಶೇಖರ್ ಆಟಕ್ಕುಂಟು ಲೆಕ್ಕಕ್ಕಿಲ್ಲ: ಕಾಂಗ್ರೆಸ್

ಮೈಸೂರು: ‘ಸಚಿವ ಎಸ್.ಟಿ.ಸೋಮಶೇಖರ್ ಅವರು ಕೇವಲ ಬಾವುಟ ಹಾರಿಸಲು ಮೈಸೂರು ಜಿಲ್ಲೆಗೆ ಬಂದು ಹೋಗುವ ಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನುದಾನ ಬಿಡುಗಡೆ ಮಾಡಿ, ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗಳನ್ನು ಉದ್ಘಾಟಿಸುತ್ತಿದ್ದಾರೆ’ ಎಂದು ಹುಣಸೂರು ಶಾಸಕ ಕಾಂಗ್ರೆಸ್‌ನ ಎಚ್.ಪಿ.ಮಂಜುನಾಥ್ ಹರಿಹಾಯ್ದರು.
‘ಸಚಿವರು ಜಿಲ್ಲೆಗೆ ಇದುವರೆಗೆ ಯಾವುದೇ ಕೊಡುಗೆ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ₹ 22,365 ಕೋಟಿ ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮೈಸೂರು ಮಹಾನಗರಕ್ಕೇ ₹ 3,800 ಕೋಟಿ ನೀಡಿದ್ದಾರೆ. ಜಿಲ್ಲೆಗೆ ಸೋಮಶೇಖರ್ ಇದುವರೆಗೆ ನೀಡಿರುವ ಕೊಡುಗೆ ಏನು ಎಂದು ಶ್ವೇತಪತ್ರ ಹೊರಡಿಸಲಿ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
‘ಬಿಜೆಪಿ ಶಾಸಕರು ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದಾರೆ. ಅವರನ್ನು ವಿಧಾನಸೌಧದಲ್ಲಿ ಕೈ ಎತ್ತುವುದಕ್ಕೆ ಮಾತ್ರ ಇಟ್ಟುಕೊಂಡಿದ್ದಾರೆ. ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್ ಅವರನ್ನು ಪದೇಪದೇ ಕಡೆಗಣಿಸುತ್ತಿದ್ದಾರೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.