ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆದ್ದ ಸ್ಥಾನ ಉಳಿಸಿಕೊಳ್ಳಲಿ ಕಾಂಗ್ರೆಸ್‌: ಸಿಎಂ ಬಸವರಾಜ ಬೊಮ್ಮಾಯಿ ಸವಾಲು

ಭತ್ತ ತೂರಿ ಬಿಜೆಪಿ ’ಜನಸಂಕಲ್ಪ ಯಾತ್ರೆ‘ ವಿನೂತನವಾಗಿ ಉದ್ಘಾಟನೆ
Last Updated 11 ಅಕ್ಟೋಬರ್ 2022, 13:07 IST
ಅಕ್ಷರ ಗಾತ್ರ

ರಾಯಚೂರು: ‘ಕಾಂಗ್ರೆಸ್‌ ಪಕ್ಷವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ. ಇದು ನನ್ನ ನೇರವಾದ ಸವಾಲು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ತಾಲ್ಲೂಕಿನ ಗಿಲ್ಲೇಸುಗೂರು ಗ್ರಾಮದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಭತ್ತ ತೂರುವ ಮೂಲಕ ವಿನೂತನವಾಗಿ ಉದ್ಘಾಟಿಸಿ ಮಾತನಾಡಿದರು.

‘ರಾಜ್ಯದ ಜನರಿಗೆ ಬರೀ ಸುಳ್ಳು ಹೇಳುವ ಕೆಲಸವನ್ನು ಕಾಂಗ್ರೆಸ್‌ ನಾಯಕರು ಮಾಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು, ಅದರಿಂದ ಜಿಗಿದು ಬಹಳಷ್ಟು ಜನರು ನಮ್ಮ‌ಕಡೆಗೆ ಬರುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಹಳಷ್ಟು ಬದಲಾವಣೆಗಳನ್ನು ಜನರು ನೋಡಲಿದ್ದಾರೆ’ ಎಂದು ಒಗಟಾಗಿ ನುಡಿದರು.

‘ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ವಿಷಯದಲ್ಲೂ ಅಪಸ್ವರ ಎತ್ತಿ ಮಾತನಾಡುವವರು ನಿಜಕ್ಕೂ ಪರಿಶಿಷ್ಟರ ವಿರೋಧಿಗಳು. ಜನರು ಅಂಥವರಿಗೆ ತಕ್ಕಪಾಠ ಕಲಿಸಬೇಕು. ಬಿಜೆಪಿ ದೃಢಸಂಕಲ್ಪ ಹಾಗೂ ಬಿ.ಎಸ್‌.ಯಡಿಯೂರಪ್ಪ ಅವರ ಸಹಯೋಗದಲ್ಲಿ ಮೀಸಲಾತಿ ಹೆಚ್ಚಳದ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ದೇಶದಲ್ಲಿ ಶೇ 73 ರಷ್ಟು ಜನರು ನರೇಂದ್ರ ಮೋದಿ ಪರ ಒಲವು ಹೊಂದಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಇದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದರು.

ಶಾಸಕ ಶಿವನಗೌಡ ನಾಯಕ, ಸಚಿವರಾದ ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಾಲ್ದಾರ್‌ ಮಾತನಾಡಿದರು. ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ, ರಾಜ್ಯದ ಬಿಜೆಪಿ ಉಸ್ತುವಾರಿ ಅರುಣಾ ಡಿ.ಕೆ. ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT