ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 9ರಿಂದ ಆರಂಭವಾಗುತ್ತಿದ್ದು, ಪ್ರತಿ ದಿನ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್, ‘ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಪರೀಕ್ಷೆ ಬರೆಯಲು ಎಲ್ಲ ರೀತಿಯ ತಯಾರಿಯನ್ನೂ ನಡೆಸಲಾಗಿದೆ. ಈ ಬಾರಿಯೂ ಹಿಜಾಬ್ ಧರಿಸಿ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ’ ಎಂದರು.

ವಿದ್ಯಾರ್ಥಿಗಳ ಹಿತಕ್ಕಾಗಿ ಬಂದ್ ವಾಪಸ್– ಡಿಕೆಶಿ: ‘ಗುರುವಾರ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸಾಂಕೇತಿಕವಾಗಿ ನಡೆಸಬೇಕಿದ್ದ ಕರ್ನಾಟಕ ಬಂದ್ ಅನ್ನು ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯದಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವುದ ರಿಂದ ಹಿಂಪಡೆಯಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.