ಬೆಂಗಳೂರು: 'ಕಣ್ಣಿಗೆ ಕಾಣದ ಕಲ್ಯಾಣ' ಎಂಬ ಪ್ರಜಾವಾಣಿಯ ಒಳನೋಟದ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಭಾನುವಾರ ಟ್ವೀಟ್ ಮಾಡಿದೆ.
ಬಿಜೆಪಿಯು ಕಲ್ಯಾಣ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಟ್ವೀಟ್‌ನಲ್ಲಿ ಆರೋಪಿಸಿದೆ.
'ಬಿಜೆಪಿಗೆ ಬೇಕಿರುವುದು ಅಧಿಕಾರವಷ್ಟೇ ಅಭಿವೃದ್ಧಿಯಲ್ಲ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ನೀಡಬೇಕಿದ್ದ ವಿಶೇಷ ಅನುದಾನವನ್ನು ಕೇಂದ್ರ ಸರ್ಕಾರ ನೀಡಿಲ್ಲ. ರಾಜ್ಯ ಸರ್ಕಾರದಿಂದ ಪೂರ್ಣ ಅನುದಾನ ಸಿಕ್ಕಿಲ್ಲ' ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
'ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣ ಕಡೆಗಣಿಸಿರುವ ಬಿಜೆಪಿಯು ಯಾವ ನೈತಿಕತೆಯ ಆಧಾರದಲ್ಲಿ ಕಲಬುರಗಿಯ ಪಾಲಿಕೆ ಅಧಿಕಾರಕ್ಕಾಗಿ ಹಪಹಪಿಸುತ್ತಿದೆ?' ಎಂದು ಕೆಪಿಸಿಸಿ ಪ್ರಶ್ನಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.