ಸೋಮವಾರ, ಡಿಸೆಂಬರ್ 6, 2021
24 °C

ಉಗ್ರಪ್ಪ ವಿರುದ್ಧ ಕ್ರಮ ಕೈಗೊಳ್ಳದ ಅಸಹಾಯಕ ಡಿಕೆಶಿ: ಬಿಜೆಪಿ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಪಿಸುಮಾತು' ಪ್ರಕರಣ ನಡೆದು ಅದೆಷ್ಟೋ ದಿನಗಳಾದರೂ ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಡಿ.ಕೆ.ಶಿವಕುಮಾರ್‌ ಅವರಿಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವೇಕೆ ಎಂದು ಬಿಜೆಪಿ ಪ್ರಶ್ನಿಸಿದೆ. 

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯ ಘಟಕವು, ‘ಪರಿಷತ್ ಚುನಾವಣೆಯಲ್ಲಿ ಯಾರಾದರೂ ಬಂಡಾಯವಾಗಿ ಸ್ಪರ್ಧಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಎಚ್ಚರಿಸಿದ್ದಾರೆ. ಆದರೆ, ಡಿಕೆಶಿ ತಕ್ಕಡಿ ಎದ್ದೇಳುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲೇ ವ್ಯಂಗ್ಯವಾಡಿದ್ದ ಉಗ್ರಪ್ಪ ವಿರುದ್ಧ ಏಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ? ಭಯವೋ, ಬೆದರಿಕೆಯೋ?‘ ಎಂದು ಲೇವಡಿ ಮಾಡಿದೆ.

‘ಕೆಪಿಸಿಸಿ ಕಚೇರಿಯಲ್ಲೇ ಪಿಸುಮಾತು ಪ್ರಕರಣ ನಡೆದು ಅದೆಷ್ಟೋ ದಿನಗಳಾದರೂ ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಡಿ.ಕೆ.ಶಿವಕುಮಾರ್‌ ಅವರಿಗೆ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲವೇಕೆ? ಉಗ್ರಪ್ಪ ಅವರು ಸಿದ್ದರಾಮಯ್ಯ ಬಣದವರೆಂಬ ಕಾರಣಕ್ಕೆ ಅಲ್ಪಸಂಖ್ಯಾತ ಸಮುದಾಯದ ಸಲೀಂ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಲಾಯ್ತೇ?‘ ಎಂದು ಬಿಜೆಪಿ ವ್ಯಂಗ್ಯವಾಡಿದೆ. 

#ಅಸಹಾಯಕಡಿಕೆಶಿ ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಬಿಜೆಪಿ ಬಳಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು