ಭಾನುವಾರ, ಅಕ್ಟೋಬರ್ 24, 2021
25 °C

ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಲು ಕಾಂಗ್ರೆಸ್‌ ತೀರ್ಮಾನ: ಬಿಜೆಪಿ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರ್ಪೊರೇಶನ್‌ ಚುನಾವಣೆಯಲ್ಲಿ ಅಭ್ಯರ್ಥಿಗಳಿಂದ ₹5 ರಿಂದ ₹10 ಸಾವಿರ ಸಂಗ್ರಹಿಸಿದ್ದ ಕಾಂಗ್ರೆಸ್‌ ಪಕ್ಷ ಮುಂದಿನ ವಿಧಾನಸಭೆ ಚುನಾವಣೆಗಾಗಿ ₹1 ಲಕ್ಷ ವಸೂಲಿ ಮಾಡಲು ತೀರ್ಮಾನಿಸಿದೆ ಎಂದು ಬಿಜೆಪಿ ಆರೋಪಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯುಳ್ಳ ವಿಡಿಯೊವನ್ನು ಟ್ವೀಟ್‌ ಮಾಡಿರುವ ಬಿಜೆಪಿ, 'ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಜನರನ್ನು ಲೂಟಿ ಮಾಡಿತ್ತು. ಈಗ ತನ್ನ ಪಕ್ಷದವರನ್ನೇ ಬಹಿರಂಗವಾಗಿ ಲೂಟಿ ಮಾಡುತ್ತಿದೆ' ಎಂದು ವಾಗ್ದಾಳಿ ನಡೆಸಿದೆ.

'ಕಾರ್ಪೊರೇಶನ್‌ ಚುನಾವಣೆಯಲ್ಲಿ ₹5 ರಿಂದ ₹10 ಸಾವಿರ ಸಂಗ್ರಹಿಸಿದ್ದ ಕಾಂಗ್ರೆಸ್‌ ಪಕ್ಷ ಮುಂದಿನ ಚುನಾವಣೆಗಾಗಿ ₹1 ಲಕ್ಷ ವಸೂಲಿ ಮಾಡಲು ತೀರ್ಮಾನಿಸಿದೆ' ಎಂದು ಟೀಕಿಸಿದೆ.

ಇದರಲ್ಲಿ ನಿಮ್ಮ ಪಾಲೆಷ್ಟು ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿ ಪ್ರಶ್ನಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು